ಬೆಂಗಳೂರು (ಕರಾವಳಿ ಟೈಮ್ಸ್) : ಹೃದಯ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬಂದಿದ್ದ ಪುಟ್ಟ ಕಂದ ಸೈಫುಲ್ ಅಝ್ಮಾನ್ ವೈದ್ಯರ ತಂಡ ನಡೆಸಿದ ಯಶಸ್ವಿ ಶಸ್ತ್ರ ಚಿಕಿತ್ಸೆಯ ಬಳಿಕ ಸೋಮವಾರ ಆರೋಗ್ಯದಿಂದ ಆಸ್ಪತ್ರೆಯಿಂದ ಮನೆಗೆ ತೆರಳಿದೆ.
ಕಂದ ಸೈಫುಲ್ ಅಝ್ಮಾನ್ ನ ತೆರೆದ ಹೃದಯ ಸರ್ಜರಿ ಮಾಡುವಲ್ಲಿ ಯಶಸ್ವಿಯಾಗಿರುವ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಸೋಮವಾರ ಮಗು ಹಾಗೂ ಪೆÇೀಷಕರನ್ನು ಆಸ್ಪತ್ರೆಯಿಂದ ಬೀಳ್ಕೊಟ್ಟಿದ್ದಾರೆ.
ಮಗುವಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಕುರಿತು ಪ್ರತಿಕ್ರಯಿಸಿದ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್, ಫೆಬ್ರವರಿ 6 ರಂದು 40 ದಿನದ ಮಗುವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಝೀರೋ ಟ್ರಾಫಿಕ್ ಮೂಲಕ ಅಂಬ್ಯುಲೆನ್ಸ್ ಚಾಲಕ ಮುಹಮ್ಮದ್ ಹನೀಫ್ 4 ತಾಸು 32 ನಿಮಿಷಗಳಲ್ಲಿ ಜಯದೇವ ಆಸ್ಪತ್ರೆಗೆ ತಲುಪಿಸಿದ್ದ. 7 ರಂದು 12 ಮಂದಿ ವೈದ್ಯರ ತಂಡ ಮಗುವಿನ ಆಪರೇಷನ್ ಪ್ರಕ್ರಿಯೆ ಕೈಗೊಂಡಿತ್ತು. ಸಂಧಿಗ್ಧ ಪರಿಸ್ಥಿತಿಯಲ್ಲಿ ಈ ಆಪರೇಷನ್ ಮಾಡಲಾಗಿತ್ತು. ಮಗುವಿನ ಹೃದಯದ ಎಡಭಾಗಕ್ಕೆ 4 ರಕ್ತನಾಳಗಳು ಜೋಡಣೆಯಾಗಬೇಕಿತ್ತು. ಆದರೆ ಬಲಭಾಗಕ್ಕೆ ಜೋಡಣೆ ಆಗಿತ್ತು. ಹೀಗಾಗಿ ಈ ಚಿಕಿತ್ಸೆ ಸುಲಭವಾಗಿರಲಿಲ್ಲ. ಸವಾಲನ್ನು ಧೈರ್ಯದಿಂದ ಸ್ವೀಕರಿಸಿದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಕಂದಮ್ಮ ಇದೀಗ ಸಂಪೂರ್ಣ ಆರೋಗ್ಯವಾಗಿದೆ ಎಂದರು.
ಮಗುವಿನ ಚಿಕಿತ್ಸೆಗೆ ಒಂದೂವರೆ ಲಕ್ಷ ರೂಪಾಯಿ ಖರ್ಚಾಗಿದ್ದು, ಮಗುವಿನ ಕುಟುಂಬದ ಬಿಪಿಎಲ್ ಪಡಿತರ ಚೀಟಿ ಸೌಲಭ್ಯದಿಂದ 1 ಲಕ್ಷ 20 ಸಾವಿರ ರೂಪಾಯಿ ಬಂದಿದ್ದರೆ, ಉಳಿಕೆ ಮೊತ್ತವನ್ನು ಜಯದೇವ ಆಸ್ಪತ್ರೆಯ ಆಂತರಿಕ ಸಂಪನ್ಮೂಲದಿಂದ ಭರಿಸಲಾಗಿದೆ. ಮಗುವಿನ ಶಸ್ತ್ರಚಿಕಿತ್ಸೆಯ ಖರ್ಚು ಸಂಪೂರ್ಣವಾಗಿ ಉಚಿತವಾಗಿದ್ದು, ಪೆÇೀಷಕರು ಈ ಚಿಕಿತ್ಸೆಯಿಂದ ಖುಷಿಯಾಗಿದ್ದಾರೆ ಎಂದು ಡಾ. ಮಂಜುನಾಥ್ ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಮಗುವಿನ ಪೆÇೀಷಕರು, ಮಂಗಳೂರಿಂದ ಬೆಂಗಳೂರಿಗೆ ಕರೆದುಕೊಂಡು ಬರುವಾಗ ಮಗುವಿನ ಜೀವದ ಮೇಲೆ ಆಸೆ ಕೈ ಬಿಟ್ಟಿದ್ದೆವು. ಆದರೆ ವೈದ್ಯರು ನಮ್ಮ ಮಗುವನ್ನು ಉಳಿಸಿದ್ದಾರೆ. ತುಂಬಾ ಖುಷಿಯಾಗುತ್ತಿದೆ. ವೈದ್ಯರಿಗೆ ಎಷ್ಟು ಧನ್ಯವಾದಗಳನ್ನು ಅರ್ಪಿಸಿದರು ಕಡಿಮೆಯೇ ಎಂದು ವೈದ್ಯರ ಕಾರ್ಯವನ್ನು ತುಂಬು ಹೃದಯದಿಂದ ಬಣ್ಣಿಸಿದರು.
الحمد لله
ReplyDeleteMasha allah
ReplyDelete