ಬಂಟ್ವಾಳ (ಕರಾವಳಿ ಟೈಮ್ಸ್) : ಬಿ ಸಿ ರೋಡು ರೈಲ್ವೇ ಮೇಲ್ಸೇತುವೆಯ ಹಳಿಯಲ್ಲಿ ಬಿ ಮೂಡ ಗ್ರಾಮದ ಅಲೆತ್ತೂರು ನಿವಾಸಿ ಮೋಹನ್ ಶೆಟ್ಟಿ (37) ಎಂಬವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಬಿ ಸಿ ರೋಡಿನ ರೈಲ್ವೆ ಮೇಲ್ಸೇತುವೆಯ ಹಳಿಯಲ್ಲಿ ಮೃತದೇಹ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ನಗರ ಪೊಲೀಸರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅದು ಮೋಹನ್ ಶೆಟ್ಟಿಯ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದೆ.
ರೈಲ್ವೆ ಹಳಿಯಲ್ಲಿ ನಡೆದಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದಾರೋ ಅಥವಾ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೋ ಎಂಬುದು ನಿಗೂಢವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ರೈಲ್ವೆ ಪೆÇಲೀಸರು ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.
ಜಾಹೀರಾತುಗಳು
0 comments:
Post a Comment