ಬೆಂಗಳೂರು (ಕರಾವಳಿ ಟೈಮ್ಸ್) : ಅನಾರೋಗ್ಯದಿಂದ ಬಳಲುತ್ತಿದ್ದ, ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ, ಮಾಜಿ ಸಚಿವ ಸಿ. ಚನ್ನಿಗಪ್ಪ ಚಿಕಿತ್ಸೆಗೆ ಸ್ಪಂದಿಸದೆ ಇಂದು (ಫೆ 21 ಶುಕ್ರವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವರಿಗೆ ಸಿಂಗಾಪುರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
ಚನ್ನಿಗಪ್ಪ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಧರಂಸಿಂಗ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಎಚ್.ಡಿ. ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಸಾಮಾನ್ಯ ರೈತ ಕುಟುಂಬದಿಂದ ಬಂದಿದ್ದ ಚನ್ನಿಗಪ್ಪ ಅವರು ಪೆÇಲೀಸ್ ಹುದ್ದೆ ತೊರೆದು ರಾಜಕೀಯ ಪ್ರವೇಶ ಮಾಡಿ ಅದರಲ್ಲಿ ಯಶಸ್ಸು ಕಂಡಿದ್ದರು. ಬಳಿಕ ಅವರ ಮಕ್ಕಳನ್ನೂ ರಾಜಕೀಯಕ್ಕೆ ಕರೆತಂದಿದ್ದು, ಪುತ್ರ ಡಿ.ಸಿ. ಗೌರಿಶಂಕರ್ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಜಾಹೀರಾತುಗಳು
0 comments:
Post a Comment