ಬಂಧಿತ ಆರೋಪಿ ಹಾರಿಸ್ |
ವಿಟ್ಲ (ಕರಾವಳಿ ಟೈಮ್ಸ್) : ಅಳಿಕೆ ಗ್ರಾಮದ ಕಾಂತಡ್ಕ ಎಂಬಲ್ಲಿ ಸೋಮವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು ಟಿಪ್ಪರ್ ಲಾರಿಯಲ್ಲಿ ಅಕ್ರಮ ಗಾಂಜಾ ಸಾಗಾಟ ಪತ್ತೆ ಹಚ್ಚಿದ್ದು, ಆರೋಪಿ ಅಳಿಕೆ ನಿವಾಸಿ ಹಾರಿಸ್ (27) ಎಂಬಾತನನ್ನು ಸೊತ್ತುಗಳ ಸಹಿತ ದಸ್ತಗಿರಿ ಮಾಡಿದ್ದಾರೆ.
ಆರೋಪಿ ಕೆಎಲ್11 ಡಬ್ಲ್ಯೂ3418 ನೊಂದಣಿ ಸಂಖ್ಯೆಯ ಟಿಪ್ಪರ್ ಲಾರಿಯಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಸಾಗಟ ಮಾಡಲು ತಯಾರಿ ನಡೆಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣಾಧಿಕಾರಿ ವಿನೋದ್ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ.
ದಾಳಿ ವೇಳೆ ಪೊಲೀಸರು 20 ಸಾವಿರ ರೂಪಾಯಿ ಮೌಲ್ಯದ 1.465 ಕೆಜಿ ಗಾಂಜಾ, 6 ಲಕ್ಷ ರೂಪಾಯಿ ಮೌಲ್ಯದ ಟಿಪ್ಪರ್ ಲಾರಿ, 1 ಪ್ಲಾಸ್ಟಿಕ್ ಕೈ ಚೀಲ, 2 ಸಾವಿರ ರೂಪಾಯಿ ಮೌಲ್ಯದ ಮೊಬೈಲ್ ಪೆÇೀನ್ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಕಲಂ 8(ಸಿ) ಜೊತೆಗೆ 20(ಬಿ)(2)(ಬಿ) ಎನ್ ಡಿಪಿಎಸ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.
0 comments:
Post a Comment