ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವ ಉದ್ದೇಶದಿಂದ ಮತ್ತೊಂದು ಸುತ್ತಿನ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರಕಾರ ಕೋವಿಡ್ 19 ಸೋಂಕು ಕಂಡು ಬಂದಿರುವ 9 ಜಿಲ್ಲೆಗಳನ್ನು ಮಾಸಾಂತ್ಯದವರೆಗೆ ಬಂದ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಗರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ಮಹತ್ವದ ತುರ್ತು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸೋಂಕು ಕಂಡು ಬಂದಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ಮಂಗಳೂರು ಜಿಲ್ಲೆಗಳನ್ನು ಲಾಕ್ ಔಟ್ ಮಾಡಲಾಗುತ್ತಿದೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಗೊಳಿಸಲಾಗಿದೆ. ಎಸಿ ಬಸ್ ಸೇವೆ ಮಾರ್ಚ್ 31ರವರೆಗೆ ಇರುವುದಿಲ್ಲ, ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಗೆಗಳಲ್ಲಿ ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಬೇಕು, ಇಂದು ರಾತ್ರಿ 9 ಗಂಟೆಗೆ ಜನತಾ ಕರ್ಫೂ ಮುಗಿಯಲಿದೆ. ಆದರೆ, ರಾತ್ರಿ 9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
0 comments:
Post a Comment