ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದಲ್ಲಿ ಸಂಚಾರವನ್ನು ಬಂದ್ ಮಾಡಿದ್ದ ಬಿಎಂಟಿಸಿ ಇದೀಗ ಮತ್ತೆ ತನ್ನ ಸಂಚಾರವನ್ನು ಆರಂಭಿಸಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ.
ನಗರದಲ್ಲಿ ಈಗಾಗಲೇ 180 ಬಸ್‍ಗಳು ಸಂಚಾರ ಆರಂಭಿಸಿದ್ದು, 1 ಬಸ್‍ನಲ್ಲಿ 20 ಜನರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬ್ಯಾಂಕ್ ನೌಕರರು, ರಕ್ತದಾನ ಮಾಡುವವರು, ಪೆÇಲೀಸರು, ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಸೇವೆ, ಪತ್ರಕರ್ತರು, ಭದ್ರತಾ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಸಿಬ್ಬಂದಿಗಳು ಐಡಿಕಾರ್ಡ್ ತೋರಿಸಿ, ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
0 comments:
Post a Comment