ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ರಾಜಧಾನಿಯಲ್ಲಿ ಸೋಮವಾರ ಕೊರೊನಾ ಕರ್ಫ್ಯೂ ಜೊತೆಗೆ ಗುಡುಗು ಸಹಿತ ಮಳೆಯಾಗಿದ್ದು, ಜನಜೀವನ ಸ್ವಲ್ಪ ಮಟ್ಟಿಗೆ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರು ಹೊರವಲಯ ನೆಲಮಂಗಲ ನಗರ ಸೇರಿದಂತೆ ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ ಮತ್ತು ಟೌನ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ತೊಂದರೆ ಅನುಭವಿಸಿದರು.
ಮಂಗಳವಾರದಿಂದ ಮುಂದಿನ 9 ದಿನ ಕರ್ನಾಟಕ ರಾಜ್ಯಾದ್ಯಂತ ಸರಕಾರ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಜನ ಮಾರುಕಟ್ಟೆಗೆ ಮುಗಿಬಿದ್ದಿದ್ದು, ಅಗತ್ಯ ವಸ್ತುಗಳನ್ನು ಕೊಳ್ಳುವುದರಲ್ಲಿ ನಿರತರಾಗಿದ್ದರು. ಈ ವೇಳೆ ಮಳೆ ಬಂದಿದ್ದರಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಯಿತು.
ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ಜನ ಸಹಜವಾಗಿಯೇ ರೋಗ ಹರಡುವಿಕೆ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ್ದಾರೆ.
0 comments:
Post a Comment