ಬಂಟ್ವಾಳ (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಜಾಸ್ತಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರಕಾರದ ಅದೇಶದಂತೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಪ್ರತಿ ತಾಲೂಕಿನಲ್ಲಿ ಗ್ರಾಮ ಮಟ್ಟದ ಸಮಿತಿಗಳನ್ನು ರಚಿಸಿ ಆ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕಾರ್ಯಕ್ಕೆ ವೇಗ ಹೆಚ್ಚಿಸುವ ಸಲುವಾಗಿ ಬಿಸಿರೋಡಿನÀ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಮತ್ತು ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಮುನ್ನೆಚ್ಚರಿಕ ಕ್ರಮಗಳ ಕುರಿತಂತೆ ಸಮಿತಿಗಳನ್ನು ರಚಿಸಲಾಗಿದೆ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪ್ರತಿಮಾ ಅವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ಉಳಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಶಿಕ್ಷಕರು, ಅಂಗನವಾಡಿ ಮೇಲ್ವಿಚಾಕರು, ಬಿ.ಎಚ್.ಒ/ ಹಿ.ಮ.ಆ. ಸಹಾಯಕಿ/ ಕಿ.ಮ.ಆ. ಸಹಾಯಕಿ, ಅಂಗನವಾಡಿ ಸಹಾಯಕಿ, ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಈ ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ.
ಜಿಲ್ಲೆಯ ಎಲ್ಲಾ ಪ್ರಾ.ಆ. ಕೇಂದ್ರ, ಸ.ಆ. ಕೇಂದ್ರ, ತಾ.ಆ. ಕೇಂದ್ರ ಜಿಲ್ಲಾ ಆಸ್ಪತ್ರೆಯಲ್ಲಿ ಮೇಲ್ವಿಚಾರಣಾ/ ತಪಾಸಣಾ ಸಮಿತಿಯನ್ನು ರಚಿಸಿ ಪ್ರತಿದಿನ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕೊರೊನಾ ವೈರಸ್ ಸಂಶಯಿತ ಮತ್ತು 14 ವಾರಗಳ ಪ್ರಯಾಣ ಇತಿಹಾಸವಿರುವ ಅಥವಾ ಕೊರೊನಾ ಪ್ರಕರಣಗಳಿರುವ ದೇಶಗಳಿಂದ ಯಾವುದೇ ವ್ಯಕ್ತಿಗಳು ಬಂದಿದ್ದಲ್ಲಿ ಆ ವ್ಯಕ್ತಿಗಳ ಬಗ್ಗೆ ವರದಿಗಳನ್ನು ಪಡೆಯುವುದು, ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಈ ಸಮಿತಿಯ ಮುಖ್ಯ ಕರ್ತವ್ಯವಾಗಿದೆ.
ಜೊತೆಗೆ ಅ ವರದಿಯನ್ನು ಪರಿಶೀಲನೆ ನಡೆಸಿ ಬಳಿಕ ಪ್ರತಿದಿನ ತಾಲೂಕು ಆಡಳಿಕ್ಕೆ ಅಲ್ಲಿಂದ ಜಿಲ್ಲಾ ಆಡಳಿತದ ಸರ್ವಲೆನ್ಸ್ ಘಟಕಕ್ಕೆ ಕಳುಹಿಸಿ ಕೊಡುವ ಜವಬ್ದಾರಿ ಈ ಸಮಿತಿಯ ಮೇಲಿದೆ. ಪ್ರಥಮವಾಗಿ ಈ ಸಮಿತಿಯ ವ್ಯಾಪ್ತಿಯಲ್ಲಿ ಬರುವವರು ಯಾವುದೋ ಕೊರೊನಾ ವೈರಸ್ ಬಗ್ಗೆ ಸಂಶಯಗಳು ಬಂದಲ್ಲಿ ತಾಲೂಕು ಆಡಳಿತ ತಹಶೀಲ್ದಾರ್ ಮತ್ತು ಸಮಿತಿ ಅಧ್ಯಕ್ಷರಾಗಿರುವ ತಾಲೂಕು ವೈದ್ಯಾಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಬೇಕು. ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಪ್ರತ್ಯೇಕ ವಾರ್ಡ್‍ಗಳ ವ್ಯವಸ್ಥೆ ಮಾಡಲಾಗಿದೆ. ತಾಲೂಕಿನ ಜನ ಭಯಪಡದೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ತಹಶೀಲ್ದಾರ್ ಮನವಿ ಮಾಡಿದ್ದಾರೆ.
0 comments:
Post a Comment