ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ-ಮೇಲಿನ ಏರಿಯಾ ನಿವಾಸಿ ಯಾದವ ಎಂಬವರ ಪುತ್ರಿ, ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ (23) ಎಂಬಾಕೆ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ನೊಂದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸಹ್ಯಾದ್ರಿ ಕಾಲೇಜಿನ ಪ್ರಥಮ ಎಂಬಿಎ ವಿದ್ಯಾರ್ಥಿನಿಯಾಗಿದ್ದ ರಕ್ಷಿತಾ ಪ್ರಥಮ ಸೆಮಿಸ್ಟರ್‍ನಲ್ಲಿ ಅಂಕ ಕಡಿಮೆಯಾಗಿದೆ ಎಂಬ ಕಾರಣಕ್ಕಾಗಿ ಮನೆಯ ಅಡುಗೆ ಕೋಣೆಯಲ್ಲಿ ಚೂಡಿದಾರ್ ವೇಲನ್ನೇ ಬಳಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೆÇೀಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
0 comments:
Post a Comment