ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ - Karavali Times ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ - Karavali Times

728x90

25 March 2020

ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಕೋರಿದ್ದಾರೆ.

    ಕೊರೋನಾ ವೈರಸ್‍ನಿಂದಾಗಿ ಜಗತ್ತಿನಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜನ ಪ್ರಾಣ ಕಳೆದುಕೊಳ್ಳುತ್ತಿದ್ದು, ಇದು ರಾಜ್ಯದಲ್ಲೂ ಕಂಡು ಬಂದಿದೆ. ಇದನ್ನು ತಡೆಗಟ್ಟಲು ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳುತ್ತಿದ್ದು, ಈ ವೈರಸ್‍ನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರದ ವತಿಯಿಂದ ಮಾಡಿಸಲಾಗುತ್ತಿದ್ದು, ರೋಗವನ್ನು ಪತ್ತೆ ಹಚ್ಚಲು ಹೆಚ್ಚಿನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿರುತ್ತದೆ.

    ಈ ಎಲ್ಲಾ ಸರ್ಕಾರದ ಕಾರ್ಯತಂತ್ರಗಳನ್ನು ಮನಗಂಡು ಈ ವೈರಾಣು ಹರಡುವುದನ್ನು ತಡೆಗಟ್ಟಲು ತಾವು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಹಾಗೂ ಕಾಲ ಕಾಲಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸಬೇಕೆಂದು ವಿನಂತಿಸಿದೆ. ಈ ಕಾರ್ಯಕ್ಕಾಗಿ ದೇಣಿಗೆ ಸಲ್ಲಿಸಲು ಇಚ್ಛಿಸಲು ದಾನಿಗಳು ಈ ಕೆಳಗಿನ ಅಧಿಕೃತ ಬ್ಯಾಂಕ್ ಖಾತೆಗೆ ದೇಣಿಗೆಯನ್ನು ಸಲ್ಲಿಸಬಹುದು. ಈ ಖಾತೆಗೆ ಧನಾದೇಶ/ ಬೇಡಿಕೆ ಹುಂಡಿ/  ವಿದ್ಯುನ್ಮಾನ ಮೂಲಕ ದೇಣಿಗೆ ಸಲ್ಲಿಸಬಹುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ,

ಖಾತೆಯ ಹೆಸರು : Chief Minister Relief Fund Covid-19
ಬ್ಯಾಂಕ್ ಹೆಸರು: SBI (State Bank oF India)
ಶಾಖೆ: Vidhana soudha Branch
ಖಾತೆ ಸಂಖ್ಯೆ; 39234923151, ಐಎಫ್‍ಎಸ್‍ಸಿ ಕೋಡ್: SBIN0040277, ಎಂಐಸಿಆರ್ ಸಂಖ್ಯೆ 560002419, ಚೆಕ್ ಮತ್ತು ಡಿಡಿ ಕಳುಹಿಸಬೇಕಾದ ವಿಳಾಸ: ನಂ.235-ಎ, 2ನೆ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು-560001.

ಈ ರೀತಿ ಸಲ್ಲಿಸುವ ದೇಣಿಗೆಗೆ, ಆದಾಯ ತೆರಿಗೆ ಕಾಯ್ದೆ 80 ಜಿ(2)ರಡಿ ತೆರಿಗೆ ವಿನಾಯಿತಿ ಇದೆ. ಆದಾಯ ತೆರಿಗೆ ವಿನಾಯಿತಿ ಪಡೆಯಲು PAN NO.AAAGC1692P ಅಥವಾ GGGGG0000G ಅನ್ನು ಬಳಸಬಹುದು ಎಂದು ಮುಖ್ಯಮಂತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ Rating: 5 Reviewed By: karavali Times
Scroll to Top