ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕಾಡಳಿತ ಹಾಗೂ ಆರೋಗ್ಯಾಧಿಕಾರಿಗಳು ಜಂಟಿ ಸಭೆ ನಡೆಸಿ ಪರಾಮರ್ಶೆ ನಡೆಸಿತು.
ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು ಅವರು ತಾಲೂಕಿನ ಪ್ರತಿ ಸಮುದಾಯ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕು ಕಛೇರಿಯ ಬಹುತೇಕ ಎಲ್ಲಾ ಸರಕಾರಿ ಸಾರ್ವಜನಿಕ ಸೇವೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದ್ದು, ಜನಸಂದಣಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
0 comments:
Post a Comment