ಮೈಸೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಿಶ್ವಪ್ರಸಿದ್ಧ ಮೈಸೂರು ಅರಮನೆಯನ್ನು ಮಾರ್ಚ್ 15 ರಿಂದ 23 ರವರೆಗೆ ಮುಚ್ಚಲು ಅರಮನೆ ಆಡಳಿತ ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಈ ದಿನಗಳಲ್ಲಿ ನಿತ್ಯ ನಡೆಯುತ್ತಿದ್ದ ಧ್ವನಿ ಮತ್ತು ಬೆಳಕಿನ ಸಂಜೆ ಪ್ರದರ್ಶನಗಳು ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಅರಮನೆ ವ್ಯವಸ್ಥಾಪಕ ಮಂಡಳಿ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ತಿಳಿಸಿದ್ದಾರೆ.
ಪ್ರತಿವರ್ಷ ಮಾರ್ಚ್ ಆರಂಭವಾಗುತ್ತಿದ್ದಂತೆ, ಅರಮನೆ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಅರಮನೆ, ಕೆ.ಆರ್.ಎಸ್., ಚಾಮುಂಡಿ ಬೆಟ್ವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ಇಲ್ಲಿಗೆ ಬರುವ ಪ್ರವಾಸಿಗರ ಪಾಲಿಗೆ ವಿಲನ್ ಆಗಿ ಪರಿಣಮಿಸಿದೆ.
0 comments:
Post a Comment