ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸಲು ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅನುಮತಿ ನೀಡಿದ್ದಾರೆ.
ಆದರೆ ಜನ ಗುಂಪು ಸೇರದೆ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ದಿನದ 24 ಗಂಟೆ ದಿನಸಿ ಅಂಗಡಿ ತೆರೆಲು ಅವಕಾಶ ನೀಡಲಾಗಿದೆ. ಜನಜಂಗುಳಿ ತಪ್ಪಿಸಲು 24 ಗಂಟೆಯೂ ಓಪನ್ ಮಾಡಲು ಅನುಮತಿ ನೀಡಲಾಗಿದೆ ಎಂದಿದ್ದಾರೆ.
ದಿನಸಿ, ಸೂಪರ್ ಮಾರ್ಕೆಟ್‍ಗೆ ಅನುಮತಿ ನೀಡಲಾಗಿದೆ. ಗುಂಪು ಸೇರದಂತೆ ಪೆÇಲೀಸರು ಮನವಿ ಮಾಡಿದ್ದಾರೆ. ಅಲ್ಲದೇ ವೈದ್ಯಕೀಯ ನೆರೆವಿಗಾಗಿ ಯಾವುದೇ ಪಾಸ್ ಅಗತ್ಯ ಇಲ್ಲ ಎಂದೂ ಅವರು ಸ್ಪಷ್ಟ ಪಡಿಸಿದ್ದಾರೆ.
0 comments:
Post a Comment