ಬೆಂಗಳೂರು (ಕರಾವಳಿ ಟೈಮ್ಸ್) : ಕೆಪಿಸಿಸಿ ಅಧ್ಯಕ್ಷರಾಗಿ ಇತ್ತೀಚೆಗೆ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ್ ಕಳೆದೆರಡು ದಿನಗಳಿಂದ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗುತ್ತಿದ್ದು, ಎಲ್ಲರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.
ಕೆಪಿಸಿಸಿ ಮಾಜಿ ಅದ್ಯಕ್ಷ, ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಬಳಿಕ ಆರ್.ಟಿ. ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ನಿವಾಸಕ್ಕೂ ಬೇಟಿ ನೀಡಿ ಅಲ್ಲಿಯೂ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ನಂತರ ಜಯನಗರದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿ ಅವರ ಜೊತೆಯೂ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ನಂತರ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್ ಅವರ ನಿವಾಸಗಳಿಗೆ ಭೇಟಿ ನೀಡಿದ ಡಿಕೆಶಿ ಅವರೊಂದಿಗೂ ಮಾತುಕತೆ ನಡೆಸಿದ್ದು, ವಿಶ್ವಾಸಕ್ಕೆ ಪಡೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
ಪಟ್ಟಾಭಿಷೇಕದ ನಂತರ ಡಿಕೇಶಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಬೆಳವಣಿಗೆ ಪಕ್ಷದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯನಿರ್ವಹಿಸುವ ಸೂಚನೆ ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಡಿಕೇಶ್ ಅವರ ನಡೆ ಟಾನಿಕ್ ಒದಗಿಸಲಿದೆಯೇ ಎಂಬುದನ್ನು ಮುಂದಿನ ದಿನಗಳೇ ನಿರ್ಧರಿಸಲಿದೆ. ಆದರೆ ಡಿಕೆಶಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕಕರ್ತರಂತೂ ಫುಲ್ ಖುಷಿಯಾಗಿದ್ದಾರೆ ಎನ್ನಲಾಗಿದೆ.
0 comments:
Post a Comment