ನವದೆಹಲಿ (ಕರಾವಳಿ ಟೈಮ್ಸ್) : ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅವಧಿ ಮುಕ್ತಾಯವಾಗಿರುವ ಡ್ರೈವಿಂಗ್ ಲೈಸೆನ್ಸ್ (ಡಿ.ಎಲ್.), ಲರ್ನರ್ ಲೈಸೆನ್ಸ್ (ಎಲ್.ಎಲ್.ಆರ್.) ಹಾಗೂ ಆರ್.ಸಿ. (ನೋಂದಣಿ ಪ್ರಮಾಣ ಪತ್ರ) ಗಳ ವ್ಯಾಲಿಡಿಟಿಯನ್ನು ಜೂನ್ 30ರವರೆಗೆ ವಿಸ್ತರಿಸಿದೆ.
ಫೆಬ್ರವರಿ 1ಕ್ಕೆ ರಿಜಿಸ್ಟ್ರೇಶನ್ ಹಾಗೂ ಲೈಸೆನ್ಸ್ ಅವಧಿ ಮುಗಿದಿರುವ ಎಲ್ಲಾ ವಾಹನಗಳು ಜೂನ್ 30 ರವರೆಗೆ ವ್ಯಾಲಿಡಿಟಿಯನ್ನು ಹೊಂದಿರಲಿವೆ. ತುರ್ತು ಸೇವೆಯ ವಾಹನಗಳು, ಟ್ರಕ್‍ಗಳು ಹಾಗೂ ಸರಕುಗಳನ್ನು ಸಾಗಿಸುವ ವಾಹನಗಳು ಯಾವುದೇ ತೊಂದರೆಯನ್ನು ಎದುರಿಸದೇ ಸಂಚರಿಸುವಂತಾಗಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ. ಎಲ್ಲಾ ರಾಜ್ಯ ಸರ್ಕಾರಗಳು ಈ ಆದೇಶವನ್ನು ಪಾಲಿಸುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
ಡ್ರೈವಿಂಗ್ ಲೈಸೆನ್ಸ್ ಹಾಗೂ ರಿಜಿಸ್ಟ್ರೇಶನ್‍ಗಳ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲು ಆದೇಶಿಸಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ, ಎಲ್ಲಾ ಆರ್‍ಟಿಒ ಹಾಗೂ ರಿಜಿಸ್ಟ್ರೇಶನ್ ಕಚೇರಿಗಳನ್ನು ಏಪ್ರಿಲ್ 14 ರವರೆಗೆ ಮುಚ್ಚಲಾಗಿದೆ. ಇದರಿಂದಾಗಿ ಹೊಸ ವಾಹನಗಳ ನೋಂದಣಿ ಹಾಗೂ ಹಳೆ ವಾಹನಗಳ ನವೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಫೆಬ್ರವರಿ 1ಕ್ಕೆ ನೋಂದಣಿ ಹಾಗೂ ಪರವಾನಗಿ ಅವಧಿ ಮುಗಿದಿರುವ ಎಲ್ಲಾ ವಾಹನಗಳ ವ್ಯಾಲಿಡಿಟಿಯನ್ನು ಮುಂದುವರೆಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಬರುವ ಫಿಟ್‍ನೆಸ್ ಸರ್ಟಿಫಿಕೇಟ್, ಪರ್ಮಿಟ್, ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಶನ್ ಹಾಗೂ ಇತರ ದಾಖಲೆಗಳು ಇವುಗಳಲ್ಲಿ ಸೇರಿವೆ. ಈ ಹೊಸ ನಿಯಮವನ್ನು ತಕ್ಷಣದಿಂದ ಜಾರಿಗೊಳಿಸಬೇಕೆಂದು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
0 comments:
Post a Comment