ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ನೂತನ ನೇತ್ರಾವತಿ ಸೇತುವೆಯ ಅಡಿಭಾಗದಲ್ಲಿ ಅಪರಿಚಿತ ಗಂಡಸಿನ ಶವ ಶುಕ್ರವಾರ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ.
ಈತ ನಿನ್ನೆ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನದಿಗೆ ಹಾರಿರುವ ಬಗ್ಗೆ ತಿಳಿದು ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶವದ ಗುರುತು ಪರಿಚಯ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಸ್ಥಳದಲ್ಲಿ ಜಮಾಯಿಸಿರುವ ಸ್ಥಳೀಯರನ್ನು ಚದುರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಶವ ಮೇಲಕ್ಕೆತ್ತುವ ವ್ಯವಸ್ಥೆಯನ್ನು ಪೊಲೀಸರು ಮಾಡುತ್ತಿದ್ದಾರೆ.
0 comments:
Post a Comment