ನವದೆಹಲಿ (ಕರಾವಳಿ ಟೈಮ್ಸ್) : ಈಶಾನ್ಯ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 654 ಪ್ರಕರಣಗಳನ್ನು ದಾಖಲಾಗಿದ್ದು, 1820 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
654 ಪ್ರಕರಣಗಳ ಪೈಕಿ 47 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದವುಗಳು ಎಂದು ಪೆÇಲೀಸರು ಪ್ರಕಟಿಸಿದ್ದಾರೆ. ಕೋಮುಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 1,820 ಜನರನ್ನು ಬಂಧಿಸಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಈ ಮಧ್ಯೆ, ದೆಹಲಿ ಹೈಕೋರ್ಟ್, ಸರಕಾರಿ ಆಸ್ಪತ್ರೆಯಲ್ಲಿರುವ ಅಪರಿಚಿತ ಮೃತ ದೇಹಗಳ ವಿವರ ಪ್ರಕಟಿಸುವಂತೆ ಪೆÇಲೀಸರಿಗೆ ಸೂಚಿಸಿದೆ.
ಹಿಂಸಾಚಾರದಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೊನ್ನೆಯಷ್ಟೆ ಹೇಳಿಕೆ ನೀಡಿದ್ದರು.
0 comments:
Post a Comment