ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಕೊಂಚ ಸಡಿಲಿಸಿರುವ ಸರಕಾರ 7 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಮುಗಿಸುವ ಅವಧಿಯನ್ನು ಮಾರ್ಚ್ 31 ರವರೆಗೆ ಮುಂಡೂಡಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್‍ಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಅಲ್ಲದೆ 7 ರಿಂದ 9ನೇ ತರಗತಿ ವಾರ್ಷಿಕ ಪರೀಕ್ಷೆಗಳನ್ನು ಮಾ 23ರೊಳಗೆ ಮುಗಿಸುವಂತೆ ಸೂಚನೆ ನೀಡಿತ್ತು.
ಇದೀಗ ಆದೇಶದಲ್ಲಿ ಕೊಂಚ ಬದಲಾವಣೆ ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ 7ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31ರವರೆಗೆ ಮುಂದೂಡಿ ಮರು ಆದೇಶ ಹೊರಡಿಸಿದ್ದಾರೆ.
0 comments:
Post a Comment