ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಅಧಿಕಾರಿಹಳ ಸಭೆ
ಮಂಗಳೂರು (ಕರಾವಳಿ ಟೈಮ್ಸ್) : ಕೊರೋನ ವೈರಸ್ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗುವುದು. ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಡಳಿತದ ನಿರ್ಧಾರವನ್ನು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಘೋಷಿಸಿದ್ದಾರೆ.
ಕೊರೋನ ವೈರಸ್ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ಅಧಿಕಾರಿಗಳ ಸಭೆ ನಡೆಯಿತು.
ಇಂದಿನಿಂದ ದೇವಸ್ಥಾನ, ದೈವಸ್ಥಾನ ಉತ್ಸವಗಳಲ್ಲಿ ಸಿಬ್ಬಂದಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ. ಇಂದಿನಿಂದ ಎಲ್ಲ ಸೇವೆಗಳನ್ನು ರದ್ದುಪಡಿಸಲಾಗುವುದು ಎಂದವರು ಸಭೆಗೆ ಮಾಹಿತಿ ನೀಡಿದರು.
ಬೀಚ್ ಪ್ರವೇಶಕ್ಕೂ ನಿರ್ಬಂಧಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಅದೇರೀತಿ ರೈಲ್ವೆ ನಿಲ್ದಾಣಗಳಲ್ಲಿ ಇಂದಿನಿಂದ ಥರ್ಮಲ್ ಸ್ಕ್ರೀನಿಂಗ್ ಆರಂಭಿಸಲಾಗುವುದು ಎಂದವರು ತಿಳಿಸಿದರು. ಕೊರೋನ ವೈರಸ್ ಸೋಂಕು ಪತ್ತೆ ಹಚ್ಚಲು ನೆರವಾಗುವಂತೆ ಮಂಗಳೂರಿನಲ್ಲಿ ಶೀಘ್ರವೇ ಟೆಸ್ಟಿಂಗ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.
ಸಭೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಪಂ ಸಿಇಒ ಸೆಲ್ವಮಣಿ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment