ಬಂಟ್ವಾಳ (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತ್ ಮತ್ತು ಇರಾ ಯುವಕ ಮಂಡಲದ ಆಶ್ರಯದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಚುಟುಕು ಕವಿ ಗೋಷ್ಠಿಯನ್ನು ಕರ್ನಾಟಕ ರಾಜ್ಯ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ನೇಮು ಪೂಜಾರಿ ಇರಾ, ತಾರನಾಥ ಬೋಳಾರ್, ಜಗದೀಶ್ ರೈ, ಚರಣ್ ಪಕ್ಕಳ, ಸುರೇಶ್ ರೈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ವೇದಿಕೆಯಲ್ಲಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
0 comments:
Post a Comment