ಬಂಟ್ವಾಳ (ಕರಾವಳಿ ಟೈಮ್ಸ್) : ಕರಾವಳಿ ಟೈಮ್ಸ್ ಪತ್ರಿಕೆಯ ಐದನೇ ವಾರ್ಷಿಕೋತ್ಸವ ಹಾಗೂ ಪತ್ರಿಕೆಯ ವೆಬ್ ಸೈಟ್ ಆವೃತ್ತಿಯ ಅಧಿಕೃತ ಲೋಕಾರ್ಪಣಾ ಕಾರ್ಯಕ್ರಮ ಮಾರ್ಚ್ 10 ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಬಂಟ್ವಾಳ ಶಾಸಕ ಯು ರಾಜೇಶ್ ನಾತಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಮಂಗಳೂರು ಶಾಸಕ ಯು ಟಿ ಖಾದರ್ ವೆಬ್ ಸೈಟ್ ಲೋಕಾರ್ಪಣೆಗೊಳಿಸಲಿದ್ದು, ಮಾಜಿ ಸಚಿವ ಬಿ ರಮಾನಾಥ ರೈ ಪತ್ರಿಕಾ ಸಂಚಿಕೆ ಬಿಡುಗಡೆಗೊಳಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ವಾರ್ತಾಧಿಕಾರಿ ಬಿ ಎ ಖಾದರ್ ಷಾ, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪುರಸಭಾ ಸದಸ್ಯ ಅಬೂಬಕ್ಕರ್ ಗುಡ್ಡೆಅಂಗಡಿ, ಬಂಟ್ವಾಳ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹ£ೀಫ್ ಗೋಳ್ತಮಜಲು, ಅಖಿಲ ಭಾರತ ಬ್ಯಾರಿ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು, ಪಾಣೆಮಂಗಳೂರು ಎಸ್ಕೆಎಸ್ಸೆಸ್ಸೆಫ್ ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ, ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ಘಟಕಾಧ್ಯಕ್ಷ ಫಾರೂಕ್ ಬಂಟ್ವಾಳ, ಕಾರ್ಯನಿರತ ಪತ್ರಕರ್ತರ ಸಂಘದ ಬಂಟ್ವಾಳ ಘಟಕಾಧ್ಯಕ್ಷ ಹರೀಶ್ ಮಾಂಬಾಡಿ, ಪುರಸಭಾ ಮಾಜಿ ಸದಸ್ಯೆ ಚಂಚಲಾಕ್ಷಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕರಾವಳಿ ಟೈಮ್ಸ್ ಪ್ರಧಾನ ಸಂಪಾದಕ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment