ಬೆಂಗಳೂರು (ಕರಾವಳಿ ಟೈಮ್ಸ್) : ಸೋಮವಾರ ರಾಜ್ಯದ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಿದ್ದ ರಾಜ್ಯ ಸರಕಾರ ಮಂಗಳವಾರದಿಂದ ರಾಜ್ಯಾದ್ಯಂತ ಲಾಕ್ ಡೌನ್ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಾದ್ಯಂತ ಕರ್ಫ್ಯೂ ವಿಧಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ. ಮಂಗಳವಾರದಿಂದ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಆಗಲಿದೆ.
0 comments:
Post a Comment