ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಹರಡುವ ಭೀತಿ ಜೋರಾಗಿರುವ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್‍ಕೆಜಿ, ಯುಕೆಜಿ) ಗಳಿಗೆ ಸೋಮವಾರದಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.
ಮೂರು ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್‍ಕೆಜಿ, ಹಾಗೂ ಯುಕೆಜಿಗಳಿಗೆ ಮುಂಜಾಗ್ರತಿ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ. ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಅಂಗನವಾಡಿ ಶಾಲೆಗಳಿಗೆ ಸೋಮವಾರದಿಂದ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
0 comments:
Post a Comment