ಮಡಿಕೇರಿ (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ಅದನ್ನು ಪರಿಗಣಿಸದೆ ಶುಕ್ರವಾರದ ನಮಾಜ್‍ಗೆಂದು ಹೊರ ಬಂದಿದ್ದವರ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಮಡಿಕೇರಿ ನಗರ ಪೆÇಲೀಸ್ ಠಾಣೆಯಲ್ಲಿ ನಡೆದಿದೆ.
ನಗರದ ಕನಕದಾಸ ರಸ್ತೆಯಲ್ಲಿರುವ ಮೆಕ್ಕಾ ಮಸೀದಿಯಲ್ಲಿ ನಮಾಜ್ ಮಾಡಲು 11 ಜನರು ಮನೆಯಿಂದ ಹೊರ ಬಂದಿದ್ದರು ಎನ್ನಲಾಗಿದೆ. ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಯಾವುದೇ ಮಸೀದಿ, ಚರ್ಚ್ ಹಾಗೂ ದೇವಾಲಯಗಳಲ್ಲಿ ಪೂಜೆ, ಪ್ರಾರ್ಥನೆ ಮಾಡದಂತೆ ಆಯಾ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿದೆ.
ಹೀಗಿದ್ದರೂ ಜಿಲ್ಲಾಡಳಿತದ ನಿಯಮಗಳನ್ನು ಉಲ್ಲಂಘಿಸಿ ನಮಾಜ್‍ಗೆ ತೆರಳಿದ್ದಾರೆ. ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಅವರು ನಿಯಮ ಉಲ್ಲಂಘಿಸಿ ಹೊರಗೆ ಬಂದರೆ ಹೋಮ್ ಕ್ವಾರಂಟೈನ್‍ನಲ್ಲಿ ಇಡುವುದಾಗಿ ಎಚ್ಚರಿಕೆ ನೀಡಿರುವುದರಿಂದ ಈ ಕ್ರಮ ಜರುಗಿದೆ ಎನ್ನಲಾಗಿದೆ.
0 comments:
Post a Comment