ಸಂಸದ ನಳಿನ್ ಕುಮಾರ್ ಕಟೀಲ್ |
ಮಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಸೋಂಕಿನ ವಿರುದ್ಧ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳುವ ಅಗತ್ಯ ಸುರಕ್ಷತಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಲ್ಲಿ 1 ಕೋಟಿ ರೂಪಾಯಿ ಹಣವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಜಾಗತಿಕ ಮಹಾಮಾರಿ ಕೊರೋನಾವೈರಸ್ ರೋಗದ ವಿರುದ್ದ ಹೋರಾಟಕ್ಕೆ ಇಡೀ ರಾಜ್ಯ ಸಜ್ಜಾಗಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಸಂಸದರ ನಿಧಿಯಿಂದ ಒಂದು ಕೋಟಿ ರೂಪಾಯಿ ನೆರವು ನೀಡುತ್ತಿದ್ದಾರೆ.
ಈ ಹಿಂದೆ ಹಲವಾರು ಸಂಸದರು ತಮ್ಮ ಸಂಸದ ಪ್ರದೇಶಾಭಿವೃದ್ಧಿ ನಿಧಿಯಿಂದ ಹಣವನ್ನು ಕೊರೋನಾ ವಿರುದ್ಧ ಹೋರಾಟಕ್ಕಾಗಿ ಬಿಡುಗಡೆ ಮಾಡಿದ್ದಾರೆ. ಇದೀಗ ನಳೀನ್ ಕುಮಾರ್ ಕಟೀಲ್ ಸಹ ಈ ಪಟ್ಟಿಗೆ ಸೇರ್ಪಡೆಯಾಗಿದ್ದು ರಾಜ್ಯದ ಉಳಿದ ಸಂಸದರೂ ಸಹ ಇದೇ ರೀತಿ ಹಣ ಬಿಡುಗಡೆ ಮಾಡಿ ಮಾದರಿಯಾಗಬೇಕಿದೆ.
ಇದೇ ವೇಳೆ ಕೊರೋನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಎಂಜಿ ಮೋಟಾರ್ ಇಂಡಿಯಾ ಸಂಸ್ಥೆ ಎರಡು ಕೋಟಿ ರೂಪಾಯಿಗಳನ್ನು ಸರಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಸಂಸ್ಥೆಗಳಿಗೆ ನೀಡಿದೆ.
0 comments:
Post a Comment