ಬಂಟ್ವಾಳ (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಂಟ್ವಾಳ ಹಾಗೂ ಸಮಗ್ರ ಶಿಶು ಅಭಿವೃದ್ದಿ ಯೋಜನೆ ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಯೋಜನೆ ಪೋಷಣ್ ಪಾಕ್ಷಿಕದ ಪ್ರಯುಕ್ತ ಜನಜಾಗೃತಿ ಜಾಥಾ ಮೆಲ್ಕಾರ್ ಜಂಕ್ಷನ್ನಿನಿಂದ ಗುಡ್ಡೆಅಂಗಡಿವರೆಗೆ ಸೋಮವಾರ ನಡೆಯಿತು. ಬಳಿಕ ಗುಡ್ಡೆಅಂಗಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಗಾಯತ್ರಿ ಕಂಬಳಿ, ಶಿಶು ಅಭಿವೃದ್ದಿ ಅಧಿಕಾರಿ ಭಾರತಿ, ಬಂಟ್ವಾಳ ಪುರಸಭಾ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜೆಸಿಂತಾ ಡಿ’ಸೋಜ, ಗಾಯತ್ರಿ ಪ್ರಕಾಶ್, ಅಂಗನವಾಡಿ ಶಿಕ್ಷಕಿಯರಾದ ವಿನ್ನಿಫ್ರೆಡ್, ವಸಂತಿ, ಅಲೀಸಾ ಫೆರ್ನಾಂಡಿಸ್, ಗುಡ್ಡೆಅಂಗಡಿ ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾವ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment