ಮಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರದಂತೆಯೂ ಭಾನುವಾರವೂ (ಮಾ 29) ಸಂಪೂರ್ಣ ಬಂದ್ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸಚಿವರು ಈ ನಿರ್ಧಾರ ಪ್ರಕಟಿಸಿದರು. ಬಂದ್ ವೇಳೆ ಅತೀ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದ್ದು, ಇದನ್ನು ನಿರ್ಬಂಧಿತ ರೀತಿಯಲ್ಲಿ ಜನ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ವರ್ತಕರ ಮೂಲಕ ಜನರಿಗೆ ಅಗತ್ಯ ಸೇವೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಇದೇ ವೇಳೆ ಹೇಳಿದ ಸಚಿವರು ಕೊರೋನಾ ನಿರ್ಬಂಧ ಮುಗಿಯುವವರೆಗೂ ಜನ ಜಿಲ್ಲಾಡಳಿತದೊಂದಿಗೆ ಸಹಕಾರ ಮನೋಭಾವ ತೋರಬೇಕು ಎಂದು ಕೋರಿದರು.
0 comments:
Post a Comment