ಬೆಂಗಳೂರು, (ಕರಾವಳಿ ಟೈಮ್ಸ್) : ನಾಳೆ ಸೋಮವಾರ (ಮಾರ್ಚ್ 23) ರಂದು ನಡೆಯಬೇಕಿದ್ದ ಕೊನೆಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಸೋಮವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೊನೆಯ ಪರೀಕ್ಷೆ ನಡೆಯಬೇಕಿತ್ತು. ನಾಳೆ ಇಂಗ್ಲಿಷ್ ಪರೀಕ್ಷೆ ನಿಗದಿಯಾಗಿತ್ತು. ಆದರೆ ಕರ್ಫ್ಯೂನಿಂದ ನಾಳೆ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಸ್ಥಗಿತವಾಗಿದೆ.
ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಅಂತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸದ್ಯಕ್ಕೆ ನಾಳೆ ನಡೆಯಬೇಕಿದ್ದ ಪರೀಕ್ಷೆ ಬಗ್ಗೆ ಮಾರ್ಚ್ 31 ರ ನಂತರ ನಿರ್ಧಾರ ಮಾಡುವ ಸಾಧ್ಯತೆ ಇದೆ.
ಸೋಮವಾರ ಸಾರ್ವಜನಿಕ ಬಸ್ ಸೇವೆಗಳನ್ನು ಸರ್ಕಾರ ಸ್ಥಗಿತ ಮಾಡಿದೆ. ಹೀಗಾಗಿ ಸರ್ಕಾರಿ ಬಸ್‍ಗಳ ಸ್ಥಗಿತದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ ಎಂದು ಶಿಕ್ಷಣ ಸಚಿವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
0 comments:
Post a Comment