ಬಿಗಿ ಪೊಲೀಸ್ ಭದ್ರತೆ ಹಾಗೂ ಸೀಸಿ ಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ
ಇದೇ ಮೊದಲ ಬಾರಿಗೆ 40 ಪುಟಗಳ ಉತ್ತರ ಪತ್ರಿಕೆ
ಬೆಂಗಳೂರು (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಬುಧವಾರ (ಮಾರ್ಚ್ 4) ದಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮಾರ್ಚ್ 4 ರಿಂದ 23 ರವರೆಗೆ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನ ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ವಿಷಯದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ ಬಸ್‍ಗಳಲ್ಲಿ ಉಚಿತ ಸಂಚಾರ ಸಿಗಲಿದೆ.
ಈ ಬಾರಿ ಒಟ್ಟು 6 ಲಕ್ಷದ 80 ಸಾವಿರದ 49 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 3 ಲಕ್ಷದ 38 ಸಾವಿರದ 431 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 41 ಸಾವಿರದ 618 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 1016 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ ಮಾಡಲಾಗಿದ್ದು, ಅಕ್ರಮ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ತಡೆಗೆ ಸ್ಕ್ವಾಡ್‍ಗಳನ್ನ ನೇಮಿಸಲಾಗಿದೆ. ಎಲ್ಲಾ ಕೇಂದ್ರಗಳಿಗೂ ಸೀಸಿ ಟಿವಿ ಕಣ್ಗಾವಲು ಹಾಕಲಾಗಿದ್ದು, ಹದ್ದಿನ ಕಣ್ಣಿಡಲಾಗಿದೆ. ಪ್ರತಿ ಕೇಂದ್ರಗಳಿಗೂ ಸಿಟ್ಟಿಂಗ್ ಸ್ಕ್ಯಾಡ್, ಫ್ಲೈಯಿಂಗ್ ಸ್ಕ್ಯಾಡ್ ನೇಮಿಸಲಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸ್ಕ್ಯಾಡ್ ಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾ ಸಮಯದಲ್ಲಿ ಕೇಂದ್ರ ಸಮೀಪದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗಿದ್ದು, ಪ್ರಶ್ನೆ ಪತ್ರಿಕೆ ಕೊಠಡಿಗೆ 24*7 ಪೆÇಲೀಸ್ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಕ್ಕೆ ಜಿಪಿಎಸ್ ಟ್ರಾಕಿಂಗ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸ್ಮಾರ್ಟ್ ಫೆÇೀನ್, ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ಕೊಂಡು ಹೋಗುವುದನ್ನು ನಿಷೇಧ ಮಾಡಲಾಗಿದೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಇಲಾಖೆ ನಿರ್ಧಾರ ಮಾಡಿದ್ದು, ಅಕ್ರಮ ಸಾಬೀತಾದರೆ 5 ಲಕ್ಷ ದಂಡ ಮತ್ತು ಜೈಲುವಾಸ ಶಿಕ್ಷೆ ವಿಧಿಸಲಾಗುತ್ತದೆ.
ಇದೇ ಮೊದಲ ಬಾರಿಗೆ ಎಲ್ಲಾ ಡಿಸಿ ಕಚೇರಿಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾನಿಟರಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಉತ್ತರ ಬರೆಯಲು 40 ಪುಟಗಳ ಉತ್ತರ ಪತ್ರಿಕೆ ನೀಡಲಾಗುತ್ತಿದೆ. ಅಲ್ಲದೆ ಪರೀಕ್ಷೆ ಮುಗಿದ ಬಳಿಕ ಹಾಜರಾತಿ, ವಿದ್ಯಾರ್ಥಿಗಳ ವಿವರಗಳನ್ನು ಸಂಪೂರ್ಣವಾಗಿ ಆನ್‍ಲೈನಿನಲ್ಲಿ ಅಪೆÇ್ಲೀಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ತಡೆಯಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಕಾಗಿದೆ. ಗೃಹ ಇಲಾಖೆ ಮತ್ತು ಪಿಯುಸಿ ಬೋರ್ಡ್, ಪ್ರತಿ ಜಿಲ್ಲೆಗಳ ಡಿಸಿಗಳಿಗೆ ಭದ್ರತೆಯ ನೇತೃತ್ವ ವಹಿಸಿ ಕೊಡಲಾಗಿದೆ. ಒಂದು ವೇಳೆ ಪೇಪರ್ ಲೀಕ್ ಸುದ್ದಿ ತಿಳಿದರೆ ವಿದ್ಯಾರ್ಥಿಗಳು ಸ್ಥಳೀಯ ಪೆÇೀಲೀಸ್ ಠಾಣೆ ಅಥವಾ ಪಿಯುಸಿ ಬೋರ್ಡ್‍ಗೆ ತಿಳಿಸಬಹುದಾಗಿದೆ.
0 comments:
Post a Comment