ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪಾಸ್ ಪೋರ್ಟ್ ಪರಿಶೀಲನೆ ತ್ವರಿತಗೊಳಿಸಿ : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ - Karavali Times ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪಾಸ್ ಪೋರ್ಟ್ ಪರಿಶೀಲನೆ ತ್ವರಿತಗೊಳಿಸಿ : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ - Karavali Times

728x90

12 March 2020

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪಾಸ್ ಪೋರ್ಟ್ ಪರಿಶೀಲನೆ ತ್ವರಿತಗೊಳಿಸಿ : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ

ಸಕಾಲದಡಿ ತಂದ ಮೊಲದ ರಾಜ್ಯ ಕರ್ನಾಟಕ ಆದರೂ ವಿಳಂಬಕ್ಕೆ ಪ್ರವೀಣ್ ಸೂದ್ ಅಸಮಾಧಾನ



ಬೆಂಗಳೂರು (ಕರಾವಳಿ ಟೈಮ್ಸ್) : ಪಾಸ್‌‍‍ಪೋರ್ಟ್‌ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ದೇಶದಲ್ಲಿ ರಾಜ್ಯ 37ನೇ ಸ್ಥಾನದಲ್ಲಿದೆ. ಚೆನ್ನೈ, ಹೈದರಾಬಾದ್‌ನಲ್ಲಿ ನಾಲ್ಕು ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ. ಆಂಧ್ರ, ತೆಲಂಗಾಣ ಮತ್ತು ಗುಜರಾತ್‌ ಉಳಿದ ರಾಜ್ಯಗಳಿಗಿಂತಲೂ ಮುಂಚೂಣಿಯಲ್ಲಿವೆ. ನಾವು ಮಾತ್ರ ಏಕೋ ಏನೋ ಪಾಸ್‌ಪೋರ್ಟ್‌ ಅರ್ಜಿಗಳ ಪರಿಶೀಲನೆ ವಿಷಯದಲ್ಲಿ ಅಸಡ್ಡೆ ತೋರುತ್ತಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ಅರ್ಜಿಗಳ ವಿಲೇವಾರಿಗಾಗಿ ‘ಸಕಾಲ’ ಯೋಜನೆ ಜಾರಿಗೆ ತಂದಿರುವ ಮೊದಲ ರಾಜ್ಯ ಕರ್ನಾಟಕ. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಬೆಂಗಳೂರು ಗ್ರಾಮೀಣದಲ್ಲಿ ಶೇ 15, ಕಲಬುರ್ಗಿಯಲ್ಲಿ ಶೇ 19 ಹಾಗೂ ಕೋಲಾರದಲ್ಲಿ ಶೇ 37ರಷ್ಟು ಅರ್ಜಿಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಆಗುತ್ತಿವೆ. ಈ 21 ದಿನವೂ ಸಾರ್ವಜನಿಕರ ದೃಷ್ಟಿಯಿಂದ ವಿಳಂಬವೇ ಆಗಿದೆ ಎಂದು ಅವರು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಬೀದರ್‌, ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಾತ್ರ ಪಾಸ್‌ಪೋರ್ಟ್‌ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆ ಕ್ರಮವಾಗಿ 5,10,11 ಹಾಗೂ 12 ದಿನಗಳಲ್ಲಿ ಮುಗಿಯುತ್ತಿದೆ. ಬೆಂಗಳೂರು ಗ್ರಾಮೀಣ, ಕಲಬುರ್ಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕ್ರಮವಾಗಿ 38, 44 ಮತ್ತು 30 ದಿನ ಹಿಡಿಯುತ್ತಿದೆ. ಬೆಂಗಳೂರು ಮತ್ತು ಮಂಗಳೂರು ಹೊರತುಪಡಿಸಿದರೆ ಉಳಿದೆಡೆ ಅಷ್ಟೇನೂ ಹೊರೆ ಇರುವುದಿಲ್ಲ. ಆದಾಗ್ಯೂ ಪಾಸ್‌ಪೋರ್ಟ್‌ ಅರ್ಜಿಗಳ ಪರಿಶೀಲನೆಗೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಸೂದ್‌ ಎಚ್ಚರಿಸಿದ್ದಾರೆ.

ಪಾಸ್‌ಪೋರ್ಟ್‌ ಅರ್ಜಿಗಳ ಪರಿಶೀಲನೆ ಮೇಲೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಕಾಲಕಾಲಕ್ಕೆ ಪ್ರಗತಿ ಪರಿಶೀಲಿಸಬೇಕು. ಈ ವಿಷಯದಲ್ಲಿ ಏನಾದರೂ ಅಡೆತಡೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು. ತಾವೂ ಮೇಲಿಂದ ಮೇಲೆ ಪ್ರಗತಿ ಪರಿಶೀಲಿಸುವುದಾಗಿ ಡಿಜಿ ಮತ್ತು ಐಜಿ ತಿಳಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪಾಸ್ ಪೋರ್ಟ್ ಪರಿಶೀಲನೆ ತ್ವರಿತಗೊಳಿಸಿ : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ Rating: 5 Reviewed By: karavali Times
Scroll to Top