ಪೊಲೀಸರು ತುರ್ತು ಸಿಬ್ಬಂದಿಗಳಿಗೆ ಅಡ್ಡಿ ಪಡಿಸಿದರೆ 100ಕ್ಕೆ ಕರೆ ಮಾಡಿ : ಕಮಿಷನರ್
ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗಳಿಗೆ ಪೆÇಲೀಸರು ಅಡ್ಡಿಪಡಿಸಿದರೆ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗಳಿಗೆ ಸಂಚರಿಸಲು ಪೊಲೀಸರು ಅಡ್ಡಿಪಡಿಸುತ್ತಿರುವ ಕುರಿತು ದೂರುಗಳು ಬರುತ್ತಿವೆ. ವೈದ್ಯರು, ಪತ್ರಕರ್ತರು ಸೇರಿದಂತೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿ ಸಂಚಾರದ ವೇಳೆ ತಮ್ಮ ಸಂಸ್ಥೆಯ ಐಡಿ ಕಾರ್ಡ್ ಇಟ್ಟುಕೊಂಡು ಓಡಾಡಬೇಕು ಎಂದರು.
ಕೆಲ ಸಾರ್ವಜನಿಕರು ಸುಖಾ ಸುಮ್ಮನೆ ರಸ್ತೆಯಲ್ಲಿ ಓಡಾಡುತ್ತಿದ್ದು, ಹೀಗಾಗಿ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದವರು ಐಡಿ ಕಾರ್ಡ್, ಕಂಪನಿಯ ಸಮವಸ್ತ್ರ ಅಥವಾ ಕೋವಿಡ್-19 ತುರ್ತು ಸೇವೆ ಬ್ಯಾನರ್ ಹಾಕಿಕೊಂಡು ಹೊರಗಿ ಬನ್ನಿ ಎಂದು ಪೊಲೀಸ್ ಆಯುಕ್ತ ಭಾಸ್ಕರ ರಾವ್ ಸಲಹೆ ನೀಡಿದ್ದಾರೆ.
0 comments:
Post a Comment