ಬಂಟ್ವಾಳ (ಕರಾವಳಿ ಟೈಮ್ಸ್) : ಕೃಷಿ, ನೀರಾವರಿ, ಪ್ರವಾಸೋದ್ಯಮ ಜೊತೆಗೆ ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ರಾಜ್ಯದ ಯಾವುದೇ ಒಂದು ಸೀಮಿತ ಬೌಗೋಳಿಕ ಪ್ರದೇಶಕ್ಕೆ ಸೀಮಿತವಾದ ಬಜೆಟ್ ಇದಾಗಿರದೆ ಸಮಗ್ರ ರಾಜ್ಯದ ಹಿತದೃಷ್ಟಿಯಿಂದ ಮಂಡಿಸಿದ ಬಜೆಟ್ ಆಗಿದೆ. ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಜನಪರ ಬಜೆಟ್ ಮಂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ರಾಜೇಶ್ ನಾಯಕ್ ಹೇಳಿದ್ದಾರೆ
0 comments:
Post a Comment