ಬಂಟ್ವಾಳ (ಕರಾವಳಿ ಟೈಮ್ಸ್) : ಒಳ ಮೀಸಲಾತಿ ಜಾರಿಗೆ ತರುವಂತೆ ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಪ್ರಸ್ತುತ ಇರುವ ಮೀಸಲಾತಿ ಯಿಂದಾಗಿ ಬಡ ಕುಟುಂಬದ ಜನರಿಗೆ ಸರಕಾರದ ಉದ್ಯೋಗ ಹಾಗೂ ಸರಕಾರದ ಸವಲತ್ತುಗಳನ್ನು ಪಡೆಯಲು ಬಹಳಷ್ಟು ಅನ್ಯಾಯವಾಗುತ್ತಿದೆ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಒಳಮೀಸಲಾತಿ ಜಾರಿಗೆ ಬರಬೇಕಾಗಿದೆ ಎಂವರು ತಿಳಿಸಿದ್ದಾರೆ.
ಬಡಜನರಿಗೆ ಅನ್ಯಾಯವಾಗುವುದರಿಂದ ಪ್ರಸ್ತುತ ಇರುವ ಮೀಸಲಾತಿ ಯಲ್ಲಿ ಒಳಮೀಸಲಾತಿಯನ್ನು ಸರಕಾರದ ತಕ್ಷಣ ಜಾರಿಗೆ ತರಬೇಕು ಎಂದು ಸಿ.ಎಂ.ಯಡಿಯೂರಪ್ಪ ಅವರನ್ನು ಒತ್ತಾಯ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬಡವರ ಪಾಲಿಗೆ ಸರಕಾರದ ಕರುಣೆ ತೋರಬೇಕಾಗಿದೆ. ಸರಕಾರ ಈ ಬಗ್ಗೆ ಗಮನಹರಿಸದಿದ್ದರೆ ಎಲ್ಲ ಹಿಂದುಳಿದ ವರ್ಗಗಳನ್ನು ಒಂದುಗೂಡಿಸಿ ದೊಡ್ಡ ಮಟ್ಟದಲ್ಲಿ ಸಮಾವೇಶ ನಡೆಸುವ ಮೂಲಕ ಸರಕಾರವನ್ನು ಎಚ್ಚರಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
0 comments:
Post a Comment