ಮಂಗಳೂರು (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಟ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ ಹರ್ಷ ಅವರು ಎಚ್ಚರಿಸಿದ ಮರುದಿನವೇ ಪೊಲೀಸರು ಕಾರ್ಯಾಚರಣೆ ಬಿಗುಗೊಳಿಸಿದ್ದು, ಸೋಮವಾರ ಅನಗತ್ಯ ಸಂಚಾರ ನಡೆಸಿದ ಕಾರು, ಬೈಕ್ ಸಹಿತ ಸುಮಾರು 50ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇದೇ ವೇಳೆ ಕಿಡಿಗೇಡಿಗಳು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಹೆಸರಿನಲ್ಲಿ ಕೆಲ ಸುಳ್ಳು ವರದಿಗಳನ್ನು ಹರಡುತ್ತಿದ್ದಿ, ಇಂತಹ ಸಮಾಜಘಾತುಕರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಪೊಲೀಸ್ ಆಯುಕ್ತರು ಸಾರ್ವಜನಿಕರು ಇಂತಹ ಕಿಡಿಗೇಡಿ ಸುದ್ದಿಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಅಧಿಕೃತ ಮಾಹಿತಿಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ತಿಳಿಸಿದ್ದಾರೆ.
0 comments:
Post a Comment