ವಿಟ್ಲ (ಕರಾವಳಿ ಟೈಮ್ಸ್) : ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಮಾಡ ದೇವಸ್ಥಾನದ ರಸ್ತೆಯ ಬಳಿ ಕೊಳಕು ತ್ಯಾಜ್ಯಗಳನ್ನು ಖಾಸಗಿ ಜಾಗದಲ್ಲಿ ರಾಶಿ ಹಾಕಲಾಗುತ್ತಿದ್ದು, ಇದರಿಂದಾಗಿ ಸ್ಥಳೀಯರು ವಾಸ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇಲ್ಲಿ ರಾಶಿ ಹಾಕುವ ತ್ಯಾಜ್ಯದಿಂದಾಗಿ ಪರಿಸರದಲ್ಲಿ ದುರ್ವಾಸನೆ ಬೀರುತ್ತಿದ್ದು, ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ. ರಾತ್ರಿ ವೇಳೆ ನರಿ-ನಾಯಿಗಳು ಈ ತ್ಯಾಜ್ಯ ರಾಶಿಯನ್ನು ಸುತ್ತಲೂ ಎಳೆದಾಡುತ್ತಿರುವುದರಿಂದ ಪರಿಸರ ಇನ್ನಷ್ಟು ಕಲುಷಿತಗೊಳ್ಳುತ್ತಿದೆ ಎನ್ನುವ ಸಾರ್ವಜನಿಕರು ಸಂಬಂಧಪಟ್ಟ ಸ್ಥಳೀಯಾಡಳಿತ ಅಧಿಕಾರಿಗಳು ಈ ಬಗ್ಗೆ ತಕ್ಷಣ ಎಚ್ಚೆತ್ತುಕೊಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
0 comments:
Post a Comment