ಲಕ್ನೋ (ಕರಾವಳಿ ಟೈಮ್ಸ್) : ದೇಶಾದ್ಯಂತ ಕೋವಿಡ್-19 (ಕೊರೋನಾ ಸೋಂಕು) ಜ್ವಾಲಾಗ್ನಿಯಾಗಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ 21 ದಿನಗಳ ಕಾಲ ದೀರ್ಘ ಗೃಹಬಂಧನ ವಿಧಿಸಿ ಘೋಷಣೆ ಮಾಡಿದರೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿಯ ಲಾಕ್‍ಡೌನ್ ಘೋಷಣೆಯ ಕೆಲವೇ ತಾಸುಗಳಲ್ಲಿ ಟೆಂಪಲ್ ರನ್ ಆರಂಭಿಸಿರುವುದು ಇದೀಗ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
ಯೋಗಿ ಆದಿತ್ಯನಾಥ್ ಅವರು ಮಂಗಳವಾರ ತಡರಾತ್ರಿ ಅಯೋಧ್ಯೆಗೆ ತಲುಪಿದ್ದಾರೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುವ ಹಿನ್ನೆಲೆಯಲ್ಲಿ ಯೋಗಿ ಅವರು ಶ್ರೀರಾಮನ ವಿಗ್ರಹವನ್ನು ಬುಧವಾರ ಬೆಳಿಗ್ಗೆ ತಾತ್ಕಾಲಿಕವಾಗಿ ನಿರ್ಮಿಸಿದ ದೇವಾಲಯಕ್ಕೆ ಸ್ಥಳಾಂತರಗೊಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತರಿಂದ ಮೂವತ್ತು ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ.
ಯೋಗಿ ಅವರ ಕಾರ್ಯಕ್ರಮಕ್ಕೆ ಯಾವುದೇ ಮಾಧ್ಯಮಗಳಿಗೆ ಅವಕಾಶ ನೀಡದೆ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋ ಹಾಗೂ ಫೆÇೀಟೋಗಳು ಹರಿದಾಡುತ್ತಿವೆ. ಅಷ್ಟೇ ಅಲ್ಲದೆ ಸಿಎಂ ಆದಿತ್ಯನಾಥ್ ಅವರೇ ಸ್ವತಃ ಕೆಲವು ಫೆÇೀಟೋಗಳನ್ನು ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಜೊತೆಗೆ ಅಯೋಧ್ಯೆಯ ಜಿಲ್ಲಾಧಿಕಾರಿ, ಪೆÇಲೀಸ್ ಮುಖ್ಯಸ್ಥರು ಸೇರಿದಂತೆ ಸರಕಾರಿ ಅಧಿಕಾರಿಗಳು ಭಾಗವಹಿಸಿದ್ದರು ಎನ್ನಲಾಗಿದ್ದು, ಯೋಗಿ ಆದಿತ್ಯನಾಥ್ ಸೇರಿದಂತೆ ಕೆಲವರು ಮಾಸ್ಕ್ ಕೂಡ ಧರಿಸಿರಲಿಲ್ಲ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರ ಸೂಚನೆ, ಮನವಿಯನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗಾಳಿಗೆ ತೂರಿದ್ದಾರೆ. ದೇಶ ಇಂತಹ ವಿಷಮ ಪರಿಸ್ಥಿತಿ ಎದುರಿಸುತ್ತಿರುವ ಹೊರತಾಗಿಯೂ ಶ್ರೀರಾಮನ ಮೂರ್ತಿ ಸ್ಥಳಾಂತರಿಸವ ಅಗತ್ಯವಿತ್ತೇ ಎಂದು ಸಾರ್ವಜನಿಕರು ಬಹಿರಂಗವಾಗಿ ಪ್ರಶ್ನಿಸುತ್ತಿರುವುದು ಕೇಳಿ ಬರುತ್ತಿದೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಏಪ್ರಿಲ್ ತಿಂಗಳ ಮೊದಲ ವಾರ ಮೊದಲ ಸಭೆ ಕರೆಯಲಾಗಿದೆ. ಈ ಸಭೆಯನ್ನು ದೇವಸ್ಥಾನ ನಿರ್ಮಾಣ ಸಮಿತಿ ಮುಂದೂಡುತ್ತೋ, ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಿಎಂ ಯೋಗಿ ಆದಿತ್ಯನಾಥ್ ಅವರ ಇಂದಿನ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
0 comments:
Post a Comment