ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಚೆನ್ನೈತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಕೊಡಂಬೆಟ್ಟು ಗ್ರಾಮದ ಕುಟುಂಬಗಳಿಗೆ ದಿನ ಬಳಕೆಯ ಸಾಮಾಗ್ರಿಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಸಂದರ್ಭ ಜಿ.ಪಂ. ಸದಸ್ಯ ಬಿ. ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ರಮಾನಂದ ಸಪಲ್ಯ, ಮೋಹನ್ ಗೌಡ ಕಳ್ಮಂಜ, ಜಯಚಂದ್ರ ಬೊಲ್ಮರು, ನವೀನ್ ಶೆಟ್ಟಿ ಪಂಜೋಟ್ಟು ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment