ದಾವಣಗೆರೆ (ಕರಾವಳಿ ಟೈಮ್ಸ್) : ಚಿಕಿತ್ಸೆಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವ ತಬ್ಲಿಘಿಗಳ ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬುವರು ದಾವಣಗೆರೆ ಕೆಟಿಜೆ ನಗರ ಪೆÇೀಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಇತ್ತೀಚೆಗೆ ಮಾದ್ಯಮಗಳೊಂದಿಗೆ ಮಾತನಾಡುತ್ತಾ “ಚಿಕಿತ್ಸೆಗೆ ಸ್ಪಂದಿಸದ ತಬ್ಲಿಘಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದರೂ ತಪ್ಪಲ್ಲ” ಎಂದು ಹೇಳಿಕೆ ನೀಡಿದ್ದರು.
ಶಾಸಕರು ಸಮಾಜದಲ್ಲಿ ಶಾಂತಿ ಕದಡುವಂತಹಾ ಹೇಳಿಕೆ ನೀಡಿರುವ ಕಾರಣ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹಾಗೆಯೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಉಚ್ಚಾಟಿಸಬೇಕು ಎಂದು ಸುಭಾಷ್ ಚಂದ್ರ ಒತ್ತಾಯಿಸಿದ್ದಾರೆ.
0 comments:
Post a Comment