ಯತ್ನಾಳ್, ಹೆಗಡೆ ವಿರುದ್ಧ ಕೇಸು ದಾಖಲಿಸಿ ಬಂಧಿಸಿ : ಡಿಜಿಪಿಗೆ ರಾಜ್ಯ ಕಾಂಗ್ರೆಸ್ ಮನವಿ - Karavali Times ಯತ್ನಾಳ್, ಹೆಗಡೆ ವಿರುದ್ಧ ಕೇಸು ದಾಖಲಿಸಿ ಬಂಧಿಸಿ : ಡಿಜಿಪಿಗೆ ರಾಜ್ಯ ಕಾಂಗ್ರೆಸ್ ಮನವಿ - Karavali Times

728x90

10 April 2020

ಯತ್ನಾಳ್, ಹೆಗಡೆ ವಿರುದ್ಧ ಕೇಸು ದಾಖಲಿಸಿ ಬಂಧಿಸಿ : ಡಿಜಿಪಿಗೆ ರಾಜ್ಯ ಕಾಂಗ್ರೆಸ್ ಮನವಿ



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಹರಡಲು ಮುಸ್ಲಿಮರು ಕಾರಣ ಎಂದು ಆರೋಪ ಮಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಇಬ್ಬರು ಶಾಸಕರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಂ.ಸಿ. ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬೆಂಗಳೂರಿನ ಪೆÇಲೀಸ್ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕೊರೊನಾ ಸೋಂಕು ಹರಡುವಿಕೆ ಸಂಬಂಧ ವದಂತಿಗಳನ್ನು ಹಬ್ಬಿಸುವುದರ ಜತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಕೋಮು ಸಾಮರಸ್ಯ ಕದಡಲು ಯತ್ನಿಸುತ್ತಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಐಪಿಸಿ ಕಲಂ 153ಎ ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತಕ್ಷಣ ಬಂಧಿಸಬೇಕು ಎಂದು ನಿಯೋಗ ಮನವಿಯಲ್ಲಿ ಆಗ್ರಹಿಸಿದೆ.
  • Blogger Comments
  • Facebook Comments

0 comments:

Post a Comment

Item Reviewed: ಯತ್ನಾಳ್, ಹೆಗಡೆ ವಿರುದ್ಧ ಕೇಸು ದಾಖಲಿಸಿ ಬಂಧಿಸಿ : ಡಿಜಿಪಿಗೆ ರಾಜ್ಯ ಕಾಂಗ್ರೆಸ್ ಮನವಿ Rating: 5 Reviewed By: karavali Times
Scroll to Top