ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಮಹಾಮಾರಿಗೆ ಮತ್ತೋರ್ವ ಮಹಿಳೆ ಬಲಿ - Karavali Times ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಮಹಾಮಾರಿಗೆ ಮತ್ತೋರ್ವ ಮಹಿಳೆ ಬಲಿ - Karavali Times

728x90

23 April 2020

ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಮಹಾಮಾರಿಗೆ ಮತ್ತೋರ್ವ ಮಹಿಳೆ ಬಲಿ


 

 

ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೇರಿಕೆ

ಕಳೆದ ವಾರ ಮೃತಪಟ್ಟಿದ್ದ ಮಹಿಳೆಯ ಅತ್ತೆ ಇದೀಗ ಸಾವು


ಮಂಗಳೂರು (ಕರಾವಳಿ ಟೈಮ್ಸ್) : ಕೋವಿಡ್-19 ಮಹಾಮಾರಿ ವೈರಸ್ಸಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೇರಿದಂತಾಗಿದೆ.

    ಬಂಟ್ವಾಳದ ಮುಖ್ಯಪೇಟೆಯ ರಥಬೀದಿ ನಿವಾಸಿ ಕೊರೊನಾ ಸೋಂಕಿತ ಮಹಿಳೆ ಎಪ್ರಿಲ್ 19 ರಂದು ಮೃತರಾಗಿದ್ದರು. ಇದೇ ವೇಳೆ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡು ಜೀವಗಳು ಬಲಿಯಾದಂತಾಗಿದೆ.

    75 ವರ್ಷದ ವೃದ್ದ ಮಹಿಳೆ ಎಪ್ರಿಲ್ 18 ರಿಂದ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಮಂಗಳೂರಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅವರನ್ನು ಮಂಗಳೂರಿನ ಕೋವಿಡ್-19 ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆ ಏರಿಯಾವನ್ನು ಕ್ವಾರಂಟೈನ್ ಮಾಡಲಾಗಿದೆ.

    ರಾಜ್ಯದಲ್ಲಿ ಗುರುವಾರ 18 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಗುರುವಾರ ಒಂದೇ ದಿನ ಬೆಂಗಳೂರಿನಲ್ಲಿ 10 ಜನರಿಗೆ ಕೊರೊನಾ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬುಧವಾರ ಬೆಂಗಳೂರಿನ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

    ಗುರುವಾರ ಬೆಂಗಳೂರಿನಲ್ಲಿ 10, ವಿಜಯಪುರ, ಹುಬ್ಬಳ್ಳಿ ಮತ್ತು ಮಂಡ್ಯದಲ್ಲಿ ತಲಾ ಇಬ್ಬರು ಸೋಂಕಿತರು ಪತ್ತೆಯಾದರೆ, ದಕ್ಷಿಣ ಕನ್ನಡ ಹಾಗೂ ಕಲಬುಗಿಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ವಿಜಯಪುರದ ರೋಗಿ-429, 25 ವರ್ಷದ ಮಹಿಳೆಗೆ ಸೋಂಕು ಹೇಗೆ ತಗುಲಿತು ಎಂಬುದರ ಬಗ್ಗೆ ತಿಳಿದು ಬಂದಿಲ್ಲ.
  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಮಹಾಮಾರಿಗೆ ಮತ್ತೋರ್ವ ಮಹಿಳೆ ಬಲಿ Rating: 5 Reviewed By: karavali Times
Scroll to Top