ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕೊರೋನಾ ರೋಗಿ - Karavali Times ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕೊರೋನಾ ರೋಗಿ - Karavali Times

728x90

27 April 2020

ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕೊರೋನಾ ರೋಗಿ



ಬೆಂಗಳೂರು (ಕರಾವಳಿ ಟೈಮ್ಸ್) : ಆಘಾತಕಾರಿ ಬೆಳವಣಿಗೆಯಲ್ಲಿ ಕೊರೋನಾ ಪೀಡಿತ ವ್ಯಕ್ತಿಯೋರ್ವ ತಾನು ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 50 ವರ್ಷದ ರೋಗಿ ಸಂಖ್ಯೆ 466 ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ವಿಕ್ಟೋರಿಯಾ ಟ್ರಾಮಾ ಸೆಂಟರ್‍ನಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸ್ಥಳಕ್ಕೆ ವಿವಿ ಪುರಂ ಠಾಣಾ ಪೆÇೀಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವ್ಯಕ್ತಿ ಬೆಂಗಳೂರು ತಿಲಕ್ ನಗರ ನಿವಾಸಿಯಾಗಿದ್ದು ಅಣ್ಣನ ಮನೆಯಲ್ಲಿ ನೆಲೆಸಿದ್ದ ಎನ್ನಲಾಗಿದೆ. ಈತ ಆಟೋ ಚಾಲಕನಾಗಿ ದುಡಿಯುತ್ತಿದ್ದ ಎನ್ನಲಾಗಿದ್ದು, ಈತನಿಗೆ ಕಿಡ್ನಿ ವೈಫಲ್ಯವಿದ್ದು ನಿನ್ನೆಯಷ್ಟೇ ಡಯಾಲಿಸಿಸ್ ನಡೆದಿತ್ತು ಎನ್ನಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕೊರೋನಾ ರೋಗಿ Rating: 5 Reviewed By: karavali Times
Scroll to Top