ಮಂಗಳೂರು (ಕರಾವಳಿ ಟೈಮ್ಸ್) : ವಿಶ್ವಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 129ನೇ ಜನ್ಮದಿನಾಚರಣೆಯನ್ನು ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಸಭಾಭವನದಲ್ಲಿ ಆಚರಿಸಲಾಯಿತು.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಹಾರ ಹಾಕಿ ಗೌರವಾರ್ಪಣೆ ಮಾಡಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಕೆ ಹರೀಶ್ ಕುಮಾರ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕ ಜೆ.ಆರ್. ಲೋಬೊ, ಪ್ರಮುಖರಾದ ಪಿ.ವಿ. ಮೋಹನ್, ಶಾಲೆಟ್ ಪಿಂಟೋ, ಸುಭೋದಯ ಆಳ್ವ ಉಪಸ್ಥಿತರಿದ್ದರು.
0 comments:
Post a Comment