ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂಬ ನಿರ್ಣಯ ಕೈಗೊಂಡ ಅಧಿಕಾರಿ ವಿರುದ್ದ ಸುರೇಶ್ ಕುಮಾರ್ ಕೆಂಡಾಮಂಡಲ : ನೋಟೀಸ್ ಜಾರಿ - Karavali Times ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂಬ ನಿರ್ಣಯ ಕೈಗೊಂಡ ಅಧಿಕಾರಿ ವಿರುದ್ದ ಸುರೇಶ್ ಕುಮಾರ್ ಕೆಂಡಾಮಂಡಲ : ನೋಟೀಸ್ ಜಾರಿ - Karavali Times

728x90

19 April 2020

ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂಬ ನಿರ್ಣಯ ಕೈಗೊಂಡ ಅಧಿಕಾರಿ ವಿರುದ್ದ ಸುರೇಶ್ ಕುಮಾರ್ ಕೆಂಡಾಮಂಡಲ : ನೋಟೀಸ್ ಜಾರಿ



ಬೆಂಗಳೂರು (ಕರಾವಳಿ ಟೈಮ್ಸ್) : ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

2019 -20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ನಾನಾ ಹಂತದ ಪರೀಕ್ಷೆಗಳ ಆಧಾರದ ಮೇಲೆ ಗ್ರೇಡಿಂಗ್ ಮೂಲಕ ಫಲಿತಾಂಶ ನೀಡುವುದು ಉತ್ತಮ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಯವರಿಗೆ ಕೋರಲು ಅಭಿಪ್ರಾಯ ಪಡೆಯಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಧಾರವಾಡ ವಿಭಾಗದ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಹೇಳಿದ್ದು ಅವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಧಾರವಾಡ ವಿಭಾಗದಲ್ಲಿ 700ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿದ್ದು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿರುವುದರಿಂದ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅಸಾಧ್ಯ. ಅಲ್ಲದೇ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವುದು ಕೂಡ ಕಷ್ಟ. ಈ ಹಿನ್ನೆಲೆಯಲ್ಲಿ ಗ್ರೇಡಿಂಗ್ ಮೂಲಕ ಮಕ್ಕಳ ಫಲಿತಾಂಶ ನೀಡುವುದು ಉತ್ತಮ ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದರು.

ಈ ನಿರ್ಣಯದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದನ್ನು ಗಮನಿಸಿದ ಸಚಿವರು, ಅಪರ ಆಯುಕ್ತರ ಕಾರ್ಯವ್ಯಾಪ್ತಿಗೆ ಮೀರಿದ ಸಂಗತಿ ಇದಾಗಿದೆ. ಸರ್ಕಾರದ ನೀತಿಗಳನ್ನು ಅನುಷ್ಠಾನಕ್ಕೆ ತರುವುದು ಅವರ ಕೆಲಸವಾಗಿದೆ. ಸಭೆ ನಡೆಸಿ ನಿರ್ಣಯ ಕೈಗೊಳ್ಳಲು ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಪರ ಆಯುಕ್ತರ ನಡೆಸಿದ ಸಭೆಗೆ ನಿರ್ಣಯಕ್ಕೆ ಪ್ರಾಮುಖ್ಯತೆ ಕೊಡಬೇಕಿಲ್ಲ. ಇಂತಹ ಸಭೆಯನ್ನು ತಮ್ಮ ಕಾರ್ಯ ವ್ಯಾಪ್ತಿ ಮೀರಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂಬ ನಿರ್ಣಯ ಕೈಗೊಂಡ ಅಧಿಕಾರಿ ವಿರುದ್ದ ಸುರೇಶ್ ಕುಮಾರ್ ಕೆಂಡಾಮಂಡಲ : ನೋಟೀಸ್ ಜಾರಿ Rating: 5 Reviewed By: karavali Times
Scroll to Top