ಬೆಂಗಳೂರು (ಕರಾವಳಿ ಟೈಮ್ಸ್) : ಲಾಕ್‍ಡೌನ್ ಮುಗಿದ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾಡಲಾಗುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಬೇಕು, ಮಕ್ಕಳಿಗೆ ಎಷ್ಟು ಸಮಯ ಕೊಡಬೇಕು ಎಂಬುದನ್ನು ನಂತರ ತೀರ್ಮಾನ ಮಾಡುತ್ತೇವೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ದೊಡ್ಡದು ಕೊರೊನಾ ವಿರುದ್ಧ ಹೋರಾಡುವ ಪರೀಕ್ಷೆ. ಮೇ 3 ರ ನಂತರ ಇದರ ಬಗ್ಗೆ ಯೋಚಿಸುತ್ತೇವೆ. ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಆದರೆ ಪರೀಕ್ಷೆ ನಡೆಯುತ್ತದೆ. ಮಕ್ಕಳ ಮನಸ್ಸಿನಲ್ಲಿ ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಆದರೆ ಪೆÇೀಷಕರಲ್ಲಿ ಆತಂಕ ಇದೆ. ಮೇ 3ರ ನಂತರ ಒಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
0 comments:
Post a Comment