ಬಂಟ್ವಾಳ (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಈ ಹಿಂದೆ ತಿಳಿಸಿದಂತೆ ಲಾಕ್ ಡೌನ್ ಸಂಪೂರ್ಣವಾಗಿ ಮುಗಿದ ಬಳಿಕವೇ ಪ್ರಕಟಿಸಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಯಾವುದೇ ಅನಗತ್ಯ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರು ಈಗಾಗಲೇ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಿರುವುದರಿಂದ ಸದ್ಯ ಯಾವುದೇ ವೇಳಾಪಟ್ಟಿ ಪ್ರಕಟಿಸುವುದಿಲ್ಲ. ಲಾಕ್ ಡೌನ್ ಮುಗಿದು ಜನಜೀವನ ಸಹಜ ಸ್ಥಿತಿಗೆ ಮರಳಿದ ಬಳಿಕವೇ ವೇಳಾಪಟ್ಟಿಯನ್ನು ಖುದ್ದು ನಾನೇ ಪ್ರಕಟಿಸುತ್ತೇನೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಇಲ್ಲ
ಇನ್ನು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಸಲಾಗುವುದು ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದ ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಇಂತಹ ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಸುಳ್ಳು ಸುದ್ದಿಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಜಾಗರೂಕರಾಗಿರಬೇಕು ಎಂದು ಕಿವಿಮಾತು ಹೇಳಿದರು.ಅಂತಹ ಯಾವುದೇ ಕ್ರಮ ಕೈಗೊಳ್ಳುವುದಿದ್ದರೂ ಖುದ್ದು ನಾನೇ ತಿಳಿಸುತ್ತೇನೆ ಎಂದರು.
0 comments:
Post a Comment