ಬೆಂಗಳೂರು (ಕರಾವಳಿ ಟೈಮ್ಸ್) : ಇಡೀ ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವಿರುದ್ದ ಹೋರಾಟ ಮಾಡುತ್ತಿರುವ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಶುಕ್ರವಾರ 395 ಕೋಟಿ ರೂಪಾಯಿ ಅನುದಾನ ನೀಡಿದೆ.
ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಕೊರೋನಾ ಹರಡದಂತೆ ತಡೆಯಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಈ ಹಿಂದೆ ಮನವಿ ಮಾಡಿಕೊಂಡಿತ್ತು. ಇದರಂತೆ ಕೊರೋನಾ ಹರಡದಂತೆ ತಡೆಯಲು ವ್ಯವಸ್ಥೆ ಮಾಡಿಕೊಳ್ಳಲು 11.092 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಈ ಹಿಂದೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು.
ಇದೀಗ ಎಸ್‍ಡಿಆರ್‍ಎಂಎಫ್ ಅನ್ವಯ ಎಲ್ಲಾ ರಾಜ್ಯಗಳಿಗೆ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದ್ದು, 15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ಅನುದಾನ ನೀಡಿದೆ ಎಂದು ತಿಳಿದುಬಂದಿದೆ. ಇದರಂತೆ ಇದೀಗ ಕರ್ನಾಟಕ ರಾಜ್ಯಕ್ಕೆ 395 ಕೋಟಿ ರೂಪಾಯಿ ಅನುದಾನ ಸಿಗಲಿದೆ.
ಗುರುವಾರವಷ್ಟೇ ಪ್ರಧಾನಿ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಬೆ ನಡೆಸಿತ್ತು. 2020-21ನೇ ಸಾಲಿನ ಎಸ್‍ಡಿಆರ್‍ಎಂಎಫ್ ನಿಧಿಯ ಮೊದಲ ಕಂತನ್ನು ಬಿಡುಗಡೆ ಮಾಡಲು ಶುಕ್ರವಾರ ಒಪ್ಪಿಗೆ ಕೂಡ ನೀಡಿದ್ದರು. ಇದೀಗ ಮಹಾರಾಷ್ಟ್ರ ರಾಜ್ಯಕ್ಕೆ 1611 ಕೋಟಿ, ಕೇರಳ ರಾಜ್ಯಕ್ಕೆ 157 ಕೋಟಿ, ತಮಿಳುನಾಡು ರಾಜ್ಯಕ್ಕೆ 510 ಕೋಟಿ, ಆಂಧ್ರಪ್ರದೇಶಕ್ಕೆ 559.5 ಕೋಟಿ, ತೆಲಂಗಾಣ ರಾಜ್ಯಕ್ಕೆ 224.5 ಕೋಟಿ ಅನುದಾನ ಬಿಡುಗಡೆ ಮಾಡಿದೆ.
0 comments:
Post a Comment