ರಾಜ್ಯದ ಕೊರೊನಾ ಹಾಟ್‍ಸ್ಪಾಟ್‍ಗಳ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ - Karavali Times ರಾಜ್ಯದ ಕೊರೊನಾ ಹಾಟ್‍ಸ್ಪಾಟ್‍ಗಳ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ - Karavali Times

728x90

15 April 2020

ರಾಜ್ಯದ ಕೊರೊನಾ ಹಾಟ್‍ಸ್ಪಾಟ್‍ಗಳ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ



ಡೇಂಜರ್ ಝೋನ್‍ನಲ್ಲಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳು


ಹಸಿರು ವಲಯದಲ್ಲಿ ರಾಜ್ಯದ 11 ಜಿಲ್ಲೆಗಳು


ನವದೆಹಲಿ (ಕರಾವಳಿ ಟೈಮ್ಸ್) : ಕೇಂದ್ರ ಸರಕಾರವು ಜಿಲ್ಲೆಗಳಲ್ಲಿರುವ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಆಧಾರದ ಮೇಲೆ ವಲಯವಾರು ವಿಂಗಡೆ ಮಾಡಿದೆ. ರಾಜ್ಯದ 8 ಜಿಲ್ಲೆಗಳನ್ನು ರೆಡ್ ಝೋನ್ ಎಂದು ಗುರುತಿಸಿದರೆ, 11 ಜಿಲ್ಲೆಗಳು ಗ್ರೀನ್ ಝೋನ್ ಎಂದು ಹೆಸರಿಸಲಾಗಿದೆ.

ಹಾಟ್‍ಸ್ಪಾಟ್ 


ಈ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 3 ಜಿಲ್ಲೆಗಳಿವೆ. ಬಿಡುಗಡೆಯಲ್ಲಿ ಬೆಂಗಳೂರು ನಗರ, ಮೈಸೂರು, ಬೆಳಗಾವಿ ಇದ್ದು, ಈ ಮೂರು ಜಿಲ್ಲೆಗಳಲ್ಲಿ ಕೊರೊನಾ ಭಾರೀ ಪ್ರಮಾಣದಲ್ಲಿದೆ. ಈ ಪ್ರದೇಶಗಳಲ್ಲಿ ಜನರು ಮನೆಯಿಂದ ಹೊರ ಬರುವಂತಿಲ್ಲ.

ಹಾಟ್‍ಸ್ಪಾಟ್ ವಿಥ್ ಕ್ಲಸ್ಟರ್ (ವಲಯ ಡೆಂಜರ್ ಸ್ಪಾಟ್)


ಈ ಪಟ್ಟಿಯಲ್ಲಿ ಐದು ಜಿಲ್ಲೆಗಳಿವೆ. ಅವುಗಳೆಂದರೆ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಈಗಾಗಲೇ ಈ ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಯಾವುದೇ ಕ್ಷಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳು ಹೆಚ್ಚಿರುತ್ತದೆ.

ಆರೆಂಜ್ ಜೂನ್ (ನಾನ್ ಹಾಟ್‍ಸ್ಪಾಟ್)


ಈ ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳಿವೆ. ಅವುಗಳೆಂದರೆ ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಉಡುಪಿ, ಗದಗ, ತುಮಕೂರು, ಕೊಡಗು, ವಿಜಯಪುರ, ಚಿಕ್ಕಬಳ್ಳಾಪುರ, ಉತ್ತರಕನ್ನಡ ಆಗಿವೆ.

ಹಸಿರು ವಲಯ


ಈ ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳಿವೆ. ಅವುಗಳೆಂದರೆ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ. ಈ ಭಾಗದಲ್ಲಿ ಯಾವುದೇ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಆದ್ರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಸದ್ಯದ ಮಾಹಿತಿಯನ್ನು ಪಡೆದು ಕೇಂದ್ರ ಸರ್ಕಾರ ವಲಯವಾರು ಪಟ್ಟಿ ಬಿಡುಗಡೆ ಮಾಡಿದೆ. ಜೊತೆಗೆ ಪ್ರತಿ ನಾಲ್ಕು ದಿನಗಳಿಗೊಮ್ಮೆ ಈ ಪಟ್ಟಿ ಪರಿಷ್ಕೃತವಾಗುತ್ತದೆ. ಎಪ್ರಿಲ್ 20ರ ಬಳಿಕ ಕೇಂದ್ರ ಸರಕಾರ ಹೊಸ ಪಟ್ಟಿ ಬಿಡುಗಡೆ ಮಾಡಲಿದೆ. ಈ ನಾಲ್ಕು ದಿನಗಳಲ್ಲಿ ಒಂದು ವೇಳೆ ಕೊರೊನಾ ಸೋಂಕಿತರ ಸಂಖ್ಯೆ ಯಾವುದೇ ಜಿಲ್ಲೆ ಭಾರೀ ಏರಿಕೆ ಕಂಡರೆ ಅದನ್ನು ಹಾಟ್‍ಸ್ಪಾಟ್ ಪಟ್ಟಿಗೆ ಸೇರಿಸಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ.
  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದ ಕೊರೊನಾ ಹಾಟ್‍ಸ್ಪಾಟ್‍ಗಳ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ Rating: 5 Reviewed By: karavali Times
Scroll to Top