ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಜೈನ್ ಮಿಲನ್ ಮತ್ತು ಶ್ರೀ ದೇವಿ ಮೆಡಿಕಲ್ಸ್ ಸಹಯೋಗದಲ್ಲಿ ಬಂಟ್ವಾಳದ ಸ್ಥಳೀಯ ಮೂರು ಠಾಣೆಗಳಿಗೆ ಅಗತ್ಯವಿರುವ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್‍ಗಳನ್ನು ವಿತರಿಸಲಾಯಿತು.
ಬಂಟ್ವಾಳ ಗ್ರಾಮಾಂತರ ಠಾಣೆಗೆ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ ಅವರ ಮುಖಾಂತರ, ಬಂಟ್ವಾಳ ನಗರ ಠಾಣೆಗೆ ಪಿಎಸ್ಸೈ ಅವಿನಾಶ್ ಅವರ ಮುಖಾಂತರ, ಬಂಟ್ವಾಳ ಸಂಚಾರಿ ಠಾಣೆಗೆ ಪಿಎಸ್ಸೈ ರಾಜೇಶ್ ಕೆ.ವಿ. ಮುಖಾಂತರ ವಿತರಿಸಲಾಯಿತು.
ಈ ಸಂದರ್ಭ ಭಾರತೀಯ ಜೈನ್ ಮಿಲನ್ ವಲಯ 8, ಮಂಗಳೂರು ವಿಭಾಗದ ಅಧ್ಯಕ್ಷ ಸುದರ್ಶನ್ ಜೈನ್, ಕಾರ್ಯದರ್ಶಿ ಸುಭಾಷ್ ಚಂದ್ರ ಜೈನ್, ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ಡಾ. ಸುದೀಪ್ ಕುಮಾರ್, ಕಾರ್ಯದರ್ಶಿ ಸನ್ಮತಿ ಜಯಕೀರ್ತಿ, ಉಪಾಧ್ಯಕ್ಷ ಹರ್ಷರಾಜ್ ಬಲ್ಲಾಳ್ ಉಪಸ್ಥಿತರಿದ್ದರು.
0 comments:
Post a Comment