ಮಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ವೈರಸ್ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಕೊರೊನಾ ಆತಂಕದಿಂದ, ಜನ ಮನೆ ಬಿಟ್ಟು ಹೊರಗೆ ಬರುವುದು ಕಡಿಮೆಯಾಗಿದ್ದರೂ ಕಳ್ಳರು ಮಾತ್ರ ತಮ್ಮ ಕೈಚಳಕ ಪ್ರದರ್ಶಿಸುತ್ತಲೇ ಇದ್ದಾರೆ. ಕಡಬ ತಾಲೂಕಿನ ರಾಮಕುಂಜದಲ್ಲಿ ಬುಧವಾರ ರಾತ್ರಿ ಕೈ ಚಳಕ ಪ್ರದರ್ಶಿಸಿದ ಕಳ್ಳರು ಅಂಗಡಿ, ಕಟ್ಟಡಗಳಿಗೆ ನುಗ್ಗಿ ಹಣ ದೋಚಿದ್ದಾರೆ.
ರಾಮಕುಂಜ ಪರಿಸರದ ಅಂಗಡಿಗಳಿಗೆ ಬುಧವಾರ ರಾತ್ರಿ ನುಗ್ಗಿದ ಕಳ್ಳರು ಹಣ ದೋಚಿದ್ದಾರೆ. ರಾಮಕುಂಜ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಇಂಟರ್‍ನೆಟ್ ಮೋಡೆಮ್ ಎಗರಿಸಿದ್ದಾರೆ. ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕ್ಯಾಶ್ ಡ್ರಾಯರ್ ತೆರೆದು ಹಣಕ್ಕಾಗಿ ಹುಡುಕಾಟ ನಡೆದಿದ್ದಾರೆ. ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿರುವ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿನ ಎಸ್‍ಬಿಐ ಗ್ರಾಹಕ ಸೇವಾ ಕೇಂದ್ರಕ್ಕೂ ನುಗ್ಗಿದ್ದು ಇಲ್ಲಿಂದ ನಗದು ದೋಚಿದ್ದಾರೆ.
ಮೊಬೈಲ್ ಅಂಗಡಿಗೂ ನುಗ್ಗಿದ ಕಳ್ಳರು ಡಿವಿಆರ್ ಕಳವುಗೈದಿದ್ದು ಕ್ಯಾಶ್ ಡ್ರಾಯರ್ ಲಾಕ್ ತೆಗೆದು ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ರಾಮಕುಂಜ ಪದವಿಪೂರ್ವ ಕಾಲೇಜಿನ ಕಚೇರಿಗೂ ನುಗ್ಗಿದ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಡಬ ಠಾಣಾ ಪೆÇಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಲಾಗಿದೆ.
0 comments:
Post a Comment