ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ಸಮೀಪ ಚಾಲಕನ ನಿಯಂತ್ರಣ ಮೀರಿದ ಕಾರು ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಮೂರು ಮಂದಿ ಕಾರು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯರು ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಕಾರು ಪ್ರಯಾಣಿಕರ ವಿವರ ತಿಳಿದುಬಂದಿಲ್ಲ.
0 comments:
Post a Comment